• 8 ಸೆಪ್ಟೆಂಬರ್ 2024

ಹಿರಿಯ ನಟ ಇನ್ನಿಲ್ಲ!

 ಹಿರಿಯ ನಟ ಇನ್ನಿಲ್ಲ!
Digiqole Ad

ಜನಪ್ರಿಯ ನಟ ಶರತ್ ಬಾಬು.ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.

ಕನ್ನಡದ ಹಿಟ್ ಸಿನಿಮಾ ‘ಅಮೃತವರ್ಷಿಣಿ’ಯಲ್ಲಿ ನಟಿಸುವ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ. 1951ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಅವರು, ಸುಮಾರು 4 ದಶಕಗಳಿಂದ ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡದ 20ಕ್ಕೂ ಹೆಚ್ಚು ಚಿತ್ರಗಳು ಸೇರಿದಂತೆ ಇದುವರೆಗೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಮೃತರ ನಿಧನದಿಂದ ಭಾರತೀಯ ಚಿತ್ರರಂಗ ಆಘಾತಕ್ಕೊಳಗಾಗಿದೆ.( Source)ಶರತ್ ಬಾಬು

 

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ