• 8 ಸೆಪ್ಟೆಂಬರ್ 2024

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ!

 ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ!
Digiqole Ad

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ ನಿಖಿಲ್ ಕುಮಾರಸ್ವಾಮಿ, ನಾನು ಪಕ್ಷದ ಜೊತೆ ಸದಾ ನಿಲ್ಲುವೆ ಎಂದು ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ ಅವರು ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

2019ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆ ಕಣಕ್ಕಿಳಿದಿದ್ದ ನಿಣಿಲ್, ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ವಿರುದ್ಧ ಸೋಲುಂಡಿದ್ದರು. ಇದರ ನೋವಿನಿಂದ ಹೊರಬರಲು ನಿಖಿಲ್‌ಗೆ ಹಲವು ದಿನಗಳೇ ಬೇಕಾಯಿತು. ಇದೀಗ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ರಾಮನಗರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಹೀನಾಯ ಸೋಲು ಕಂಡಿದ್ದಾರೆ.

 

ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್ ಕುಮಾರಸ್ವಾಮಿ ಇದೀಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಎಚ್.ಡಿ ಕುಮಾರಸ್ವಾಮಿ ಸಮ್ಮತಿ ಕೂಡ ಸಿಕ್ಕಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಮದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ(SOURCE)

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ