• 8 ಸೆಪ್ಟೆಂಬರ್ 2024

ವಿಮಾನಕ್ಕೆ ಹಕ್ಕಿ ಡಿಕ್ಕಿ,ತಪ್ಪಿದ ಭಾರೀ ದುರಂತ!

 ವಿಮಾನಕ್ಕೆ ಹಕ್ಕಿ ಡಿಕ್ಕಿ,ತಪ್ಪಿದ ಭಾರೀ ದುರಂತ!
Digiqole Ad

ವಿಮಾನಕ್ಕೆ ಹಕ್ಕಿ ಡಿಕ್ಕಿ,ತಪ್ಪಿದ ಭಾರೀ ದುರಂತ!ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಪ್ರಯಾಣಿಕರ ಸಹಿತ ಬೆ.8.30ಕ್ಕೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ಇಂಡಿಗೋ ವಿಮಾನ ಇನ್ನೇನು ಕೆಲವೇ ಕ್ಷಣಗಳಲ್ಲಿ ಟೇಕಾಫ್ ಆಗುವ ಸಿದ್ದತೆಯಲ್ಲಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ರೆಕ್ಕೆಯ ಇಂಜಿನ್ ಭಾಗದಲ್ಲಿ ಶಬ್ದ ಉಂಟಾಗಿ ತಾಂತ್ರಿಕ ಸಮಸ್ಯೆಯ ಸೂಚನೆ ಕೊಟ್ಟಿದೆ ಎನ್ನಲಾಗಿದೆ.ವಿಮಾನ ಟೇಕಾಫ್ ಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದ ಕಾರಣ ದೊಡ್ಡ ಸಮಸ್ಯೆ ಬಗೆಹರಿಯಿತು. ಇಲ್ಲದಿದ್ದರೆ, ತುರ್ತು ಭೂಸ್ಪರ್ಶ ಮಾಡಬೇಕಾದ ಅನಿವಾರ್ಯತೆಯೂ ಇತ್ತು. ವಿಮಾನದ ಇಂಜಿನ್ ಭಾಗದಲ್ಲಾಗಲೀ, ಅಥವಾ ಬೇರಾವುದೇ ಸೂಕ್ಷ್ಮ ಭಾಗದಲ್ಲಿ ಹಕ್ಕಿ ಬಡಿದಿದ್ದರೆ, ಸಮಸ್ಯೆಗಳು ಉದ್ಭವವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಟೇಕಾಫ್ ಸಿದ್ಧತೆ ನಡೆಸುತ್ತಿರುವ ವೇಳೆ ಹಕ್ಕಿ ಬಡಿದ ಕಾರಣ ಕೂಡಲೇ ವಿಮಾನ ಯಾನವನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ನಡೆಯಿತು.ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ ವಿಮಾನವನ್ನು ವಾಪಾಸ್ ತಂದರು.ಬಳಿಕ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ಪ್ರಯಾಣಿಕರು ತೆರಳಿದರು.

ಅಂದು ನಡೆದ ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ, ಪರಿಹಾರಕ್ಕಾಗಿ ಈಗಲೂ ಹೋರಾಟ,

ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದವರು, ನಸು ನಿದ್ದೆಯಲ್ಲಿದ್ದವರು ಭೀಕರ ಅಗ್ನಿಯಲ್ಲಿ ಸುಟ್ಟು ಕರಕಲಾದದ್ದು ಎಂದಿಗೂ ಮರೆಯಲಾಗದ್ದು.

 

ಈ ಬಗ್ಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪನಿ ಮುಂಬೈನ ಕಾನೂನು ತಜ್ಞ ಎಚ್‌.ಡಿ. ನಾನಾವತಿ ಅವರ ನೇತೃತ್ವದ ಮುಲ್ಲ ಆ್ಯಂಡ್‌ ಮುಲ್ಲ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರೂ. ಪಡೆದವರೂ ಇದ್ದರು. ಆದರೆ ಈ ಪರಿಹಾರವನ್ನು ಮೃತಪಟ್ಟವರ ಆರ್ಥಿಕ ಆದಾಯ, ಅವರ ವಯಸ್ಸು ಇದೆಲ್ಲವನ್ನೂ ಲೆಕ್ಕ ಹಾಕಿ ನೀಡಲಾಗಿತ್ತು.

ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ವಾಯು ಅಪಘಾತದ ಪರಿಹಾರ ಕುರಿತು ಅಂತಾರಾಷ್ಟ್ರೀಯ ಒಪ್ಪಂದವಾದ “ಮೋಂಟ್ರಿಯಲ್‌ ಕನ್ವೆನÒನ್‌’ ಪ್ರಕಾರ ಆಗಿನ ಲೆಕ್ಕಾಚಾರದಂತೆ 75 ಲಕ್ಷ ರೂ.ನಷ್ಟು ಮೊತ್ತವನ್ನು ಮೊದಲ ಹಂತದಲ್ಲಿ ಎಲ್ಲ ಸಂತ್ರಸ್ತ ಕುಟುಂಬದವರಿಗೂ ನೀಡಬೇಕು ಎಂದು ಕುಟುಂಬ

ದವರು ಕೇರಳದಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದರು. ಇದು ಸುಪ್ರೀಂ ಕೋರ್ಟ್‌ ವರೆಗೂ ತಲಪಿತು. ಇನ್ನೂ ಸುಮಾರು 45 ಕುಟುಂಬದವರು ಕಾನೂನು ಹೋರಾಟದಲ್ಲೇ ಇದ್ದಾರೆ. ಈ ನಡುವೆ ಏರ್‌ಇಂಡಿಯಾವನ್ನು ಟಾಟಾ ಸಮೂಹ ಖರೀದಿಸಿದ್ದು, ಮಾಲಕತ್ವ ಬದಲಾಗಿರುವುದರಿಂದ ಪರಿಹಾರ ನೀಡಲು ಸಾಧ್ಯವಿಲ್ಲ, ಹಾಗಾಗಿ ಪರಿಹಾರದ ಅರ್ಜಿಗಳನ್ನು ರದ್ದುಪಡಿಸುವಂತೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ(source)

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ