• 13 ಜೂನ್ 2024

ವಾರ್ಷಿಕ ಹಬ್ಬದ ಸಂಭ್ರಮದಲ್ಲಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು

 ವಾರ್ಷಿಕ ಹಬ್ಬದ ಸಂಭ್ರಮದಲ್ಲಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
Digiqole Ad

ವಾರ್ಷಿಕ ಹಬ್ಬದ ಸಂಭ್ರಮದಲ್ಲಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು.

ಉಪ್ಪಿನಂಗಡಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಇದರ 2022-23ನೇ ಶೈಕ್ಷಣಿಕ ಸಾಲಿನ ಕಾಲೇಜು ವಾರ್ಷಿಕೋತ್ಸವ ದಿನಾಂಕ 17ನೇ ಜೂನ್ 2023ರ ಶನಿವಾರದಂದು ಪೂರ್ವಾಹ್ನ 10.00 ಗಂಟೆಗೆ ಸರಿಯಾಗಿ ಕಾಲೇಜು ಆವರಣದಲ್ಲಿ ಸ್ಥಾಪಿಸಲಾದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

 

ಉಪ್ಪಿನಂಗಡಿಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈಶ್ರೀಅಶೋಕ್ ಕುಮಾರ್ ರೈ, ಕೋಡಿಂಬಾಡಿ ವಹಿಸಲಿದ್ದು, ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಮತ್ತು ಕರ್ನಾಟಕ ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿಗಳಾದ ಡಾ| ಗಣನಾಥ ಎಕ್ಕಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಳೀಯ ಉಪ್ಪಿನಂಗಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಉಷಾಚಂದ್ರ ಮುಳಿಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ಪ್ರಾಂಶುಪಾಲರಾದ ಶ್ರೀ ಸುಬ್ಬಪ್ಪ ಕೈಕಂಬ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಅಹಮ್ಮದ್ ಎಸ್ ಎಮ್ ಹಾಗೂ ಐಕ್ಯೂಎಸಿ ಸಂಚಾಲಕರಾದ ಡಾ| ಬಸವರಾಜೇಶ್ವರಿ ದಿಡ್ಡಿಮನಿ ಉಪಸ್ಥಿತರಿರುವರು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಉಪ್ಪಿನಂಗಡಿ

ಕಾಲೇಜು ವಾರ್ಷಿಕೋತ್ಸವದ ನಿಮಿತ್ತ ದಿನಾಂಕ 16ನೇ ಜೂನ್ 2023ರ ಶುಕ್ರವಾರ ಕಾಲೇಜಿನ ವೇದಿಕೆಯಲ್ಲಿ ಉಪ್ಪಿನಂಗಡಿ ಪದವಿ ಹಾಗೂ ಸ್ನಾತ್ತಕೋತ್ತರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಚಟುವಟಿಕೆಗಳ ಸಮಾರೋಪ ನಡೆಯಲಿದೆ.

 

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!