• 8 ಸೆಪ್ಟೆಂಬರ್ 2024

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದ ಮುಖ್ಯಾಂಶಗಳು

 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದ ಮುಖ್ಯಾಂಶಗಳು
Digiqole Ad

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಾವು ಕಲಿಯುವ ವಿಷಯಗಳನ್ನು ಆಳವಾಗಿ ಅರ್ಥೈಸಿಕೊಂಡು ದಿನನಿತ್ಯದ ಜೀವನದಲ್ಲಿ ಆ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು-ಕ್ಯಾಪ್ಟನ್ ಬ್ರಿಜೇಶ್ ಚೌಟ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ,ಆಂತರಿಕ ಗುಣಮಟ್ಟ ಭರವಸಾ ಕೋಶ ದಿನಾಂಕ 6.7.2023 ರಂದು ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಕೂಡ ತಮ್ಮನ್ನು ತೊಡಗಿಸಿಕೊಂಡು , ವಿಷಯಗಳಲ್ಲಿ ಆಳವಾದ ಜ್ಞಾನವನ್ನು ಸಂಪಾದಿಸಿಕೊಂಡು, ಪರಿಪಕ್ವತೆಯನ್ನು ಪಡೆದು ನಿಜ ಜೀವನದಲ್ಲೂ ಕೂಡ ಕಲಿತ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕ್ಯಾಪ್ಟನ್ ಬ್ರಿಜೀಶ್ ಚೌಟ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳ ನೆಲೆಯಲ್ಲಿ ನುಡಿದರು. ಇನ್ನೋರ್ವ ಅತಿಥಿಗಳಾದ , ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ರಂಗಯ್ಯ ಶೆಟ್ಟಿಗಾರ್ , ಮಹಾವಿದ್ಯಾಲಯವು ಅನೇಕ ಸಾಧನೆಗಳನ್ನು ಗೈದ ವಿದ್ಯಾರ್ಥಿ ಬಳಗವನ್ನೇ ಹೊಂದಿದೆ . ಪಠ್ಯ ಪತ್ಯೇತರ ಚಟುವಟಿಕೆಗಳು ಎರಡರಲ್ಲೂ ಮಾಡಿದ ಸಾಧನೆ ಗಣನೀಯ, ಮಹಾವಿದ್ಯಾಲಯವು ಇನ್ನೂ ಹೆಚ್ಚು ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಹಣಾಧಿಕಾರಿಗಳು, ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿಗಳು ಆಗಿರುವ ಡಾ. ನಿಂಗಯ್ಯ ಇವರು ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾಕ್ಟರ್. ದಿನೇಶ P.T. ಈ ಶೈಕ್ಷಣಿಕ ಅವಧಿಯ ಮಹಾವಿದ್ಯಾಲಯದ ಸರ್ವ ಚಟುವಟಿಕೆಗಳ ವರದಿ ವಾಚನವನ್ನು ಮಾಡಿದರು. ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಅಕ್ಷತ್ ವಿದ್ಯಾರ್ಥಿ ಪರಿಷತ್ತಿನ ಚಟುವಟಿಕೆಗಳ ಕುರಿತು ವರದಿ ವಾಚಿಸಿದರು. ವಿದ್ಯಾರ್ಥಿ ಪರಿಷತ್ತಿನ ನಿರ್ದೇಶಕರಾದ ಶ್ರೀಲತಾ ಕಮೀಲ , ಕುಮಾರ್ ಶೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ವಿದ್ಯಾರ್ಥಿ ಕಾರ್ಯದರ್ಶಿ ಪ್ರತೀಕ್ಷ ರೈ ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷೆ, ಜಯಶ್ರೀ ಇವರು ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು.ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಯನ್ನು ಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Digiqole Ad

ಜಯಂತ ಅಬೀರ

https://goldfactorynews.com

ಈ ಸುದ್ದಿಗಳನ್ನೂ ಓದಿ