• 8 ಸೆಪ್ಟೆಂಬರ್ 2024

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಚಾಲನೆ

 ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಚಾಲನೆ
Digiqole Ad

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ

ಅನ್ನ ಭಾಗ್ಯ

ಅನ್ನ ಭಾಗ್ಯ ಯೋಜನೆಯಡಿ ನೇರ ಲಾಭ ವರ್ಗಾವಣೆಗೆ (ಡಿಬಿಟಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ

15 ದಿನಗಳಲ್ಲಿ ಸಂಪೂರ್ಣ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು. ಜುಲೈ 10 ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ

 ಬಿಪಿಎಲ್ ಕಾರ್ಡ್ ಪ್ರತಿ ಸದಸ್ಯರಿಗೆ 170 ರೂಪಾಯಿ

 

ಭಾಗ್ಯ

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದು ಕಾಂಗ್ರೆಸ್ ಸರ್ಕಾರದ ಐದು ಚುನಾವಣಾ ಪೂರ್ವ ಭರವಸೆಗಳಲ್ಲಿ ಒಂದಾಗಿತ್ತು. ಸದ್ಯ ಹೆಚ್ಚುವರಿ ಅಕ್ಕಿ ಲಭ್ಯವಿಲ್ಲದ ಕಾರಣ ಹಣ ಹಾಕುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಪ್ರತಿ ಕೆ.ಜಿ. ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿ ನೀಡಲುನಿರ್ಧರಿಸಲಾಗಿದೆ.

 ಬಿಪಿಎಲ್ ಕಾರ್ಡ್‌ನಲ್ಲಿ ಇರುವ ಎಲ್ಲರಿಗೂ ಹಣ

ರೇಶನ್ ಕಾರ್ಡ್

ಬಿಪಿಎಲ್‌ ಕಾರ್ಡ್‌ನಲ್ಲಿ ಹೆಸರು ಇರುವ ಕುಟುಂಬದ ಎಲ್ಲಾ ಸದಸ್ಯರಿಗೂ 170 ರೂಪಾಯಿಗಳಂತೆ ಹಣ ಹಾಕಲಾಗುತ್ತದೆ. ಒಬ್ಬರ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದಾಗಿ ಸಚಿವ ಮುನಿಯಪ್ಪ ಹೇಳಿದ್ದಾರೆ. ಅಕ್ಕಿ ದೊರೆಯುವವರೆಗೂ ಮಾತ್ರವೇ ಹಣ ಹಾಕುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಅಕ್ಕಿಯ ದೊರೆತ ನಂತರ ಮುಂದಿನ ದಿನಗಳಲ್ಲಿ ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಹೇಳಿದ್ದಾರೆ.

ಕುಟುಂಬದ ಮುಖ್ಯಸ್ಥರನ್ನು ಗುರುತಿಸಿರುವ, ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ ಎಂದು ಹೇಳಲಾಗಿದೆ ಹಣವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದ ನಂತರ ಪ್ರತಿ ಫಲಾನುಭವಿ/ ಕುಟುಂಬಕ್ಕೆ ಮೊಬೈಲ್‌ ಎಸ್‌ಎಂಎಸ್ ಮತ್ತು ವಾಟ್ಸಪ್ ಮುಖಾಂತರ ಮಾಹಿತಿ ತಲುಪಲಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ