• 27 ಮಾರ್ಚ್ 2025

ಬಿಜೆಪಿ ಮಾಜಿ ಶಾಸಕ ಸಿ.ಎಂ ನಿಂಬಣ್ಣನವರ್ ನಿಧನ

 ಬಿಜೆಪಿ ಮಾಜಿ ಶಾಸಕ ಸಿ.ಎಂ ನಿಂಬಣ್ಣನವರ್ ನಿಧನ
Digiqole Ad

ಬಿಜೆಪಿ ಮಾಜಿ ಶಾಸಕ ಸಿ.ಎಂ ನಿಂಬಣ್ಣನವರ್ ನಿಧನ

ಜು.9: ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂತೋಷ ಲಾಡ್ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ಇವರು ಶಾಸಕರಾಗಿದ್ದರು. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. ಇಂಗ್ಲಿಷ್ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಅವರು ಪಡೆದಿದ್ದರು. ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇಡಿ ಪದವಿಯನ್ನೂ ಪಡೆದಿದ್ದ ಅವರು ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದರು.

ಬಳಿಕ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿದ್ದರು. ಇವರಿಗೆ ಶಿಕ್ಷಣ ಇಲಾಖೆಯಿಂದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಸಹ ಲಭಿಸಿತ್ತು. ಬಳಿಕ ವಕೀಲ ವೃತ್ತಿಯನ್ನು ಆರಂಭಿಸಿದ್ದ ಅವರು, ಕಲಘಟಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಅನೇಕ ಮೊಕದ್ದಮೆಗಳನ್ನು ಕೈಗೆತ್ತಿಕೊಂಡು ರಾಜಿ ಮೂಲಕ ಬಗೆಹರಿಸಿದ್ದರು. ಇದು ಅವರಿಗೆ ಈ ಭಾಗದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ವಕೀಲರ ಸಂಘದ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯ ನಿರ್ವಹಿಸಿದ್ದರು. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಮೃತರ ಅಂತ್ಯಕ್ರಿಯೆ ಕಲಘಟಗಿಯಲ್ಲಿ ಸೋಮವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ