ದೆಹಲಿಯ ಶಾಲೆಗಳಿಗೆ ನಾಳೆ ರಜೆ ಘೊಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿಯ ಶಾಲೆಗಳಿಗೆ ನಾಳೆ ರಜೆ ಘೊಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಶಾಲೆಗಳನ್ನು ಸೋಮವಾರ ಒಂದು ದಿನದ ಮಟ್ಟಿಗೆ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ಪಾಶ್ಚಿಮಾತ್ಯ ಅಡಚಣೆಯಿಂದಾಗಿ ದೆಹಲಿ ಸೇರಿದಂತೆ ವಾಯುವ್ಯ ಭಾರತದಲ್ಲಿ ಮಳೆಯ ಅರ್ಭಟ ಜೋರಾಗಿದೆ. ಆದ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆ ದಾಖಲಾಗಿದೆ.
ಇದು 1982 ರಿಂದ ಈವರೆಗೆ ಜುಲೈನಲ್ಲಿ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವರುಣನ ಆರ್ಭಟಕ್ಕೆ ರಾಷ್ಟ್ರ ರಾಜಧಾನಿಯ ತತ್ತರವಾಗಿದೆ . ಹೀಗಾಗಿ ಹವಾಮಾನ ಇಲಾಖೆ ಶನಿವಾರ ರೆಡ್ ಅಲರ್ಟ್ ಘೋಷಣೆ ಮಾಡಿತ್ತು.ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್ ಆಗಿದ್ದು, ಜಲಾವೃತವಾಗಿದೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.