• 8 ಸೆಪ್ಟೆಂಬರ್ 2024

ಕೆಲವು ವಸ್ತುಗಳ ಜಿಎಸ್ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್

 ಕೆಲವು ವಸ್ತುಗಳ ಜಿಎಸ್ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್
Digiqole Ad

ಕ್ಯಾನ್ಸರ್‌ ಮೆಡಿಸಿನ್‌ಗೆ ವಿನಾಯಿತಿ:ಕೆಲವು ವಸ್ತುಗಳ ಜಿಎಸ್ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್

ಆನ್ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚು ಮಾಡಲಾಗಿದೆ. ಕ್ಯಾನ್ಸರ್ ಔಷಧಕ್ಕೆ ಜಿಎಸ್ಟಿಯಿಂದ ಸಂಪೂರ್ಣ ವಿನಾಯಿತಿಯನ್ನು ನೀಡಲಾಗಿದೆ.

ಆನ್ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.ಮೀನಿನ ಎಣ್ಣೆಯಿಂದ ತಯಾರಿಸಿದ ಪೇಸ್ಟ್, ಕೃತಕ ಆಭರಣ ತಯಾರಿಯಲ್ಲಿ ಬಳಸುವ ಜರಿ ದಾರದ ಮೇಲಿನ ಜಿಎಸ್ಟಿ ಸ್ಲ್ಯಾಬ್ ಅನ್ನೂ ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 50ನೇ ಸಭೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಲವು ವಸ್ತುಗಳ ತೆರಿಗೆಯಲ್ಲಿ ಭಾರಿ ಇಳಿಕೆ ಮಾಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಬೇಯಿಸದ ಕರಿಯದ ಸ್ನ್ಯಾಕ್ಸ್ ಪೊಟ್ಟಣದ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಕ್ಯಾನ್ಸರ್ ಔಷಧಕ್ಕೆ ಜಿಎಸ್ಟಿಯಿಂದ ಸಂಪೂರ್ಣ ವಿನಾಯಿತಿ ಘೋಷಿಸಲಾಗಿದೆ.

ಖಾಸಗಿ ಸಂಸ್ಥೆಗಳ ಉಪಗ್ರಹ ಉಡಾವಣಾ ಸೇವೆಗಳಿಗೂ ಜಿಎಸ್ಟಿ ತೆರಿಗೆ ವಿನಾಯಿತಿ ನೀಡಲಾಗಿದೆ ಹಾಗೂ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿನ ಚಟುವಟಿಕೆಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸರ್ಕಾರ ಈ ನಿಟ್ಟಿನ ಕ್ರಮ ಕೈಗೊಂಡಿದೆ.ಜಿಎಸ್‌ಟಿ ಕೌನ್ಸಿಲ್ ತನ್ನ 50ನೇ ಸಭೆಯಲ್ಲಿ ಅಪರೂಪದ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸಲಾಗುವ ಕ್ಯಾನ್ಸರ್ ಔಷಧ ದಿನುಟುಕ್ಸಿಮಾಬ್ ಮತ್ತು ಫುಡ್ ಫಾರ್ ಸ್ಪೆಷಲ್ ಮೆಡಿಕಲ್ ಪರ್ಪಸಸ್ (ಎಫ್‌ಎಸ್‌ಎಂಪಿ) ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ ಮತ್ತು ಸಿನಿಮಾ ಹಾಲ್‌ಗಳಲ್ಲಿ ನೀಡಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ ದರವನ್ನು ದೊಡ್ಡ ಮಟ್ಟದಲ್ಲಿ ಕಡಿತ ಮಾಡಿದೆ.

ಆನ್‌ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್‌ಗಳಿಗೆ ಸಂಪೂರ್ಣ ಮುಖಬೆಲೆಯ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೌನ್ಸಿಲ್ ನಿರ್ಧರಿಸಿದೆ ಎಂದು ಹೇಳಿದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ