• 8 ಸೆಪ್ಟೆಂಬರ್ 2024

ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ

 ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ
Digiqole Ad

ಮುಂದಿನ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

 

ಕೇಂದ್ರ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ ವೇಳೆ ಘೋಷಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ (NEP) ಜಾರಿ ಮಾಡುವುದಿಲ್ಲ ಎಂದಿದ್ದಾರೆ.ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಜ್ಯಮಟ್ಟದ ಶಿಕ್ಷಣ ನೀತಿ ಜಾರಿಯಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಾಡಿರುವ ಘೋಷಣೆಯ ಬಗ್ಗೆ ಪ್ರಸ್ತಾಪಿಸಿರುವಂತೆ ನಮ್ಮ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸುವುದಾಗಿ ಘೋಷಿಸಿದ್ದೇವೆ. ಹೀಗಾಗಿ ಪ್ರಣಾಳಿಕೆಯಲ್ಲಿನ ಘೋಷಣೆಗಳನ್ನು ಜಾರಿಗೆ ತರುವುದು ನಮ್ಮ ಆದ್ಯತೆಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೆಲವು ಪ್ರಮಾದಗಳಿವೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಹೊಸ ನೀತಿಯ ಕುರಿತು ಚರ್ಚಿಸಲು ಮತ್ತು ನಿರ್ಧರಿಸಲು ನಾವು ತಜ್ಞರ ವಿವಿಧ ಸಮಿತಿಗಳನ್ನು ರಚಿಸುತ್ತೇವೆ. ಅವರಿಂದ ಮುಂದಿನ ವರ್ಷದೊಳಗೆ ಹೊಸ ನೀತಿಯನ್ನು ಪಡೆಯುವ ಭರವಸೆ ಇದೆ ಎಂದು ಹೇಳಿದರು.ಉನ್ನತ ಶಿಕ್ಷಣ ಇಲಾಖೆ ಸಚಿವರು ಇಬ್ಬರೂ ಚರ್ಚೆ ಮಾಡಿ, ಎನ್‌ಇಪಿ ರದ್ದು ಮಾಡುತ್ತೇವೆ. ಇದಕ್ಕೆ ಬದಲಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವ ಚಿಂತನೆ ಇದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಪ್ರಾರಂಭ ಮಾಡುತ್ತೇವೆ. ಶಿಕ್ಷಣ ನೀತಿ ರೂಪಿಸಲು ತಜ್ಞರ ಸಮಿತಿ ರಚನೆ ಮಾಡಿತ್ತೇವೆ ಎಂದುರು.ಕೇಂದ್ರ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ ವೇಳೆ ಘೋಷಿಸಿದ್ದರು.ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ನಿವಾರಿಸಲು, ಪಠ್ಯಪುಸ್ತಕಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲು ಸರ್ಕಾರ ನಿರ್ಧರಿಸಿದೆ.ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಈ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಎನ್‌ಇಪಿ ಜಾರಿಗೊಳಿಸಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ, ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಪ್ರಣಾಳಿಕೆಯಲ್ಲೇ ಎನ್‌ಇಪಿ ರದ್ದು ಮಾಡುವುದಾಗಿ ಘೋಷಿಸಿತ್ತು ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ (NEP) ಜಾರಿ ಮಾಡುವುದಿಲ್ಲ ಎಂದಿದ್ದಾರೆ.ಇತ್ತೀಚಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣಕ್ಕೆ ಮಾರಕವಾದ ಈ ಎನ್‌ಇಪಿಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ರದ್ದು ಮಾಡಲಾಗುವುದು. ಇದಕ್ಕೆ ಬದಲಾಗಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಘೋಷಿಸಿದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ