ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಬ್ಯಾಂಕ್ ಖಾತೆ ತೆರೆಯಲು ಶಿಬಿರ ಆಯೋಜನೆ
ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಬ್ಯಾಂಕ್ ಖಾತೆ ತೆರೆಯಲು ಶಿಬಿರ ಆಯೋಜನೆ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಅನ್ನ ಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ್ದಾರೆ. ಆದರೆ ವಿವಿಧ ಜಿಲ್ಲೆಗಳಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಡಿ ಮೂಲಕ ಹಣ ಪಾವತಿ ಮಾಡಲು ಅವರು ಉಳಿತಾಯ ಖಾತೆ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತದಿಂದ ಬ್ಯಾಂಕ್ ಖಾತೆ ತೆರೆಯಲು ಶಿಬಿರ ಆಯೋಜನೆ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದೆ. 2023ರ ಜುಲೈ 20ರೊಳಗೆ ತಮ್ಮ ಬ್ಯಾಂಕ್ ಖಾತೆಗಳನ್ನು ಚಾಲ್ತಿಗೊಳಿಸಿದಲ್ಲಿ ಅಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆ ಮೂಲಕ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು ಆಹಾರಧಾನ್ಯವನ್ನು ಸರಬರಾಜು ಮಾಡುವವರೆಗೆ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ವರ್ಗಾಯಿಸಬೇಕಾಗಿರುತ್ತದೆ. ಪಡಿತರ ಚೀಟಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾರತೀಯ ಅಂಚೆ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ವತಿಯಿಂದ ಬ್ಯಾಂಕ್ ಖಾತೆ ತೆರೆಯುವ ಸಂಬಂಧ ಕ್ರಮ ಕೈಗೊಂಡಿದೆ.ಪಡಿತರ ಚೀಟಿದಾರರು ನೇರ ನಗದು ವರ್ಗಾವಣೆ ಪ್ರಯೋಜನ ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ವತಿಯಿಂದ ತಾಲೂಕುವಾರು ಶಿಬಿರ ಆಯೋಜನೆ ಮಾಡಲಾಗಿದೆ.
ಉಡುಪಿ ತಾಲೂಕಿನಲ್ಲಿ ಜುಲೈ 14 ರಂದು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಮತ್ತು , ಜು. 18 ರಂದು ಉದ್ಯಾವರ ಗ್ರಾಮ ಪಂಚಾಯತ್ ಕಚೇರಿ ಹಾಗೂ ಜು. 19 ರಂದು ಉಡುಪಿ ತಾಲೂಕು ಕಚೇರಿಯ ಆಹಾರ ಶಾಖೆ, ಹಾಗೆಯೇ ಜು. 20 ರಂದು ಕಲ್ಯಾಣಪುರ ಗ್ರಾಮ ಪಂಚಾಯತ್ ಕಚೇರಿ ಹಾಗೂ ಮಲ್ಪೆ ಅಂಚೆ ಕಚೇರಿಯಲ್ಲಿ ಶಿಬಿರ ಆಯೋಜನೆ.
ಕಾರ್ಕಳ ತಾಲೂಕಿನಲ್ಲಿ ಜು. 17 ರಂದು ಕಾರ್ಕಳ ತಾಲೂಕು ಕಚೇರಿ ಹಾಗೂ ನಲ್ಲೂರು ಗ್ರಾಮ ಪಂಚಾಯತ್ ಹಾಗೂ ಬೆಳ್ಮಣ್ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮತ್ತು ಜು. 18 ರಂದು ಅಜೆಕಾರು ನಾಡ ಕಚೇರಿ, ಮಾಳ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಈದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ
ಬ್ರಹ್ಮಾವರ ತಾಲೂಕಿನಲ್ಲಿ ಜು. 14 ರಂದು ಮಂದಾರ್ತಿ ಅಂಚೆ ಕಚೇರಿ ಹಾಗೂ ಜು. 17 ರಂದು ಬ್ರಹ್ಮಾವರ ಅಂಚೆ ಕಚೇರಿ ಹಾಗೂ ಜು. 18 ರಂದು ಕೋಟಾ ಅಂಚೆ ಕಚೇರಿಯಲ್ಲಿ ಶಿಬಿರ ಆಯೋಜನೆ.
ಕುಂದಾಪುರ ತಾಲೂಕಿನಲ್ಲಿ ಜು. 15 ರಂದು ಸಿದ್ಧಾಪುರ ಗ್ರಾಮ ಪಂಚಾಯತ್ ಹಾಗೂ ಜು. 19 ರಂದು ಹಾಲಾಡಿ ಗ್ರಾಮ ಪಂಚಾಯತ್ ಕಚೇರಿ,ಜು. 20 ರಂದು ವಂಡ್ಸೆ ಅಂಚೆ ಕಚೇರಿಯಲ್ಲಿ ಶಿಬಿರ ನಡೆಯಲಿದೆ.
ಬೈಂದೂರು ತಾಲೂಕಿನಲ್ಲಿ ಜು. 15 ರಂದು ಹಳ್ಳಿಹೊಳೆ ಗ್ರಾಮ ಪಂಚಾಯತ್ ಮತ್ತು ಜು. 17 ರಂದು ಬೈಂದೂರು ತಾಲೂಕು ಕಚೇರಿ ಆಹಾರ ಶಾಖೆ,ಹಾಗೂ ಜು. 20 ರಂದು ಕೊಲ್ಲೂರು ಗ್ರಾಮ ಪಂಚಾಯತ್ ಕಚೇರಿ ಹಾಗೂ ಮರವಂತೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ ಆಯೋಜನೆ.
ಕಾಪು ತಾಲೂಕಿನಲ್ಲಿ ಜು. 15 ರಂದು ಕಾಪು ಅಂಚೆ ಕಚೇರಿ ಮತ್ತು ಜು. 17 ರಂದು ಕಟಪಾಡಿ ಗ್ರಾಮ ಪಂಚಾಯತ್ ಹಾಗೂ ಜು. 20 ರಂದು ಶಿರ್ವ ಅಂಚೆ ಕಚೇರಿ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ ಆಯೋಜಿನೆ