• 18 ಅಕ್ಟೋಬರ್ 2024

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ

 ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ
Digiqole Ad

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ

ಲೋಕಸಭೆ ಚುನಾವಣೆಗೆ ವಿಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ನಲ್ಲಿ ಸಭೆ ನಡೆಯಲಿದೆ . ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಭರ್ಜರಿ  ಸಿದ್ಧತೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್,ಎನ್ ಸಿಪಿ,ಡಿಎಂಕೆ, ಜೆಡಿಯು, ಶಿವ ಸೇನೆ,ಟಿಎಂಶಿ ಹಲವು ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ವಿಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಬಿಜೆಪಿಯ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸುವ ವಿಪಕ್ಷಗಳ ಸಭೆಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ ಎಂದು ಮೂಲಗಳು ತಿಳಿಸಿವೆ. ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ,ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತಿತರ ನಾಯಕರ ಫೋಸ್ಟರ್ ಗಳು ರಾಜಧಾನಿಯಲ್ಲಿ ರಾರಾಜಿಸುತ್ತಿವೆ.2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರದಿಂದ ದೂರವಿಡುವ ಮಹತ್ವಕಾಂಕ್ಷೆಯೊಂದಿಗೆ ನಡೆಯಲಿರುವ ಈ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ,ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ‌ ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು .‌ಪ್ರತಿಪಕ್ಷಗಳು ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಸಭೆ ಮಾಡುತ್ತಿವೆ. ಆದರೆ ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುಯವಾಗಿಲ್ಲ.ಪ್ರತಿಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌‌‌. ನಾಳೆ ನಡೆಯುವ  ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಹೇಳಿದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ