ಐಪಿಎಲ್: ಆರ್ಸಿಬಿ ತಂಡದಲ್ಲಿ ಬದಲಾವಣೆ
ಐಪಿಎಲ್: ಆರ್ಸಿಬಿ ತಂಡದಲ್ಲಿ ಬದಲಾವಣೆ
ಐಪಿಎಲ್ 2023ರಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಮೈಕ್ ಹೆಸನ್ ಮತ್ತು ಮುಖ್ಯ ಕೋಚ್ ಸಂಜಯ್ ಬಂಗಾರ್ ಅವರನ್ನು ಕೈಬಿಡಲು ನಿರ್ಧರಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ತಂಡದಲ್ಲಿ ಮೇಜರ್ ಸರ್ಜರಿಗೆ ಆರ್ಸಿಬಿ ಫ್ರಾಂಚೈಸಿ ಮುಂದಾಗಿದೆ.
ಟೀಮ್ ಮ್ಯಾನೇಜ್ಮೆಂಟ್ನಲ್ಲಿ ಭಾರಿ ದೊಡ್ಡ ಬದಲಾವಣೆಗೆ ನಿಶ್ಚಯಿಸಿದೆ. ಈಗಾಗಲೇ ನೂತನ ಕೋಚಿಂಗ್ ಸಿಬ್ಬಂದಿ ನೇಮಿಸಿಕೊಳ್ಳಲು ತಲಾಶ್ ನಡೆಸಿದೆ.ಕೋಚ್ ಸಂಜಯ್ ಬಂಗಾರ್ ಮತ್ತು ನಿರ್ದೇಶಕ ಮೈಕ್ ಹೆಸನ್ ಅವರ ಒಪ್ಪಂದವು ಸೆಪ್ಟೆಂಬರ್ನಲ್ಲಿ ಮುಕ್ತಾಯಗೊಳ್ಳಲಿದೆ. ಈ ಸಲುವಾಗಿ ಸಂಜಯ್ ಬಂಗಾರ್, ಮೈಕ್ ಹೆಸನ್ ಅವರ ಒಪ್ಪಂದ ನವೀಕರಿಸದಿರಲು ಫ್ರಾಂಚೈಸಿ ಚಿಂತನೆ ನಡೆಸಿದೆ.ಈ ಕುರಿತು ಸ್ಪಷ್ಟನೆ ಕೇಳಲು ಇಎಸ್ಪಿಎನ್ ಕ್ರಿಕ್ಇನ್ಫೋ, ಹೆಸನ್ ಮತ್ತು ಬಂಗಾರ್ ಅವರನ್ನು ಸಂಪರ್ಕಿಸಿತು. ಆದರೆ, ಆರ್ಸಿಬಿ ಮಾಹಿತಿ ನೀಡಿದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಲು ಇಬ್ಬರೂ ಪ್ರತಿಕ್ರಿಯಿಸಲಿಲ್ಲ.
ಸಿಬ್ಬಂದಿಯನ್ನು ನೇಮಿಸಲು ಹಲವರನ್ನು ಫ್ರಾಂಚೈಸಿ ಸಂಪರ್ಕಿಸಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಸದ್ಯ ಇಎಸ್ಪಿಎನ್ಕ್ರಿಕ್ಇನ್ಫೋ ಸೇರಿದಂತೆ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ ಆರ್ಸಿಬಿ ಜೊತೆಗಿನ ಒಪ್ಪಂದ ಇನ್ನೂ ಹಾಗೆಯೇ ಇದೆ ಎಂದು ಫ್ರಾಂಚೈಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ತಂಡದಲ್ಲಿನ ಬದಲಾವಣೆಗಳ ಕುರಿತು ಯಾವುದೇ ಪ್ರಕಟಣೆ ಬಂದರೆ ಮಾಹಿತಿ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದೆ. ಸದ್ಯ ತಾಜಾ ಕೋಚ್ಗಳ ಹುಡುಕಾಟದಲ್ಲಿದೆ ಎಂಬುದು ಖಚಿತ ಮೂಲಗಳು ಸ್ಪಷ್ಟಪಡಿಸಿವೆ.2016 ರಲ್ಲಿ ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್ಸಿಬಿ ಆ ಬಳಿಕ ಮತ್ತೆ ಪ್ರಶಸ್ತಿ ಸುತ್ತಿಗೆ ತಲುಪಿರಲಿಲ್ಲ. ಇನ್ನು 2020, 2021 ಹಾಗೂ 2022 ರಲ್ಲಿ ಪ್ಲೇಆಫ್ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಮೊದಲ ಸುತ್ತಿನಲ್ಲೇ ಹೊರಬಿದ್ದಿತ್ತ.ಹೀಗಾಗಿಯೇ ಆರ್ಸಿಬಿ ಫ್ರಾಂಚೈಸಿ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ನಿರ್ಧರಿಸಿದೆ.ಹೀಗಾಗಿ ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಆರ್ಸಿಬಿ ತಂಡದಿಂದ ಕೆಲ ಆಟಗಾರರು ಹೊರಬೀಳುವುದು ಖಚಿತ. ಅದರ ಮೊದಲ ಭಾಗವಾಗಿ ಇದೀಗ ಕೋಚ್ ಹಾಗೂ ಇತರೆ ಸಿಬ್ಬಂದಿಗಳ ಬದಲಾವಣೆಗೆ ಮುಂದಾಗಿದೆ.