ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಒಳ ಉಡುಪುಗಳನ್ನು ಒಣಗಲು ಹಾಕಿದ ಪ್ರಯಾಣಿಕರು..!!
ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಒಳ ಉಡುಪುಗಳನ್ನು ಒಣಗಲು ಹಾಕಿದ ಪ್ರಯಾಣಿಕರು..!!
ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಬಟ್ಟೆ ಒಣಗಲು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದ್ದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಬಸ್ಸಿನಲ್ಲಿ ಪ್ರಯಾಣಿಕರಿಗೆ ಅಸಹ್ಯ ಹುಟ್ಟಿಸುವ ಬಟ್ಟೆಗಳು ನೇತಾಡುತ್ತಿದ್ದು, ಇದು ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಸುಬ್ರಹ್ಮಣ್ಯದಿಂದ ಕಾರವಾರ ಕ್ಕೆ ಪ್ರಯಾಣಿಸುವ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದ್ದು, ಬಸ್ ನ ಕಿಟಕಿಯಲ್ಲಿ ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಇದೀಗ ಸಾಮಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗ್ತಾ ಇದೆ