ಕಾಂಗ್ರೆಸ್ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗಿಂದು ಚಾಲನೆ,ಕಾಂಗ್ರೆಸ್’ನ 4ನೇ ಗ್ಯಾರಂಟಿ ಅನುಷ್ಠಾನ
ಕಾಂಗ್ರೆಸ್ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗಿಂದು ಚಾಲನೆ,ಕಾಂಗ್ರೆಸ್’ನ 4ನೇ ಗ್ಯಾರಂಟಿ ಅನುಷ್ಠಾನ
ಯೋಜನೆಯ ಲಾಭ ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಮನೆಯೊಡತಿಯು ಅರ್ಜಿ ಸಲ್ಲಿಸಬಹುದು. ಅರ್ಹರಿಗೆ ಆಗಸ್ಟ್ ತಿಂಗಳಿನಿಂದ ಮಾಸಿಕ 2 ಸಾವಿರ ರು. ಹಣ ನೇರವಾಗಿ ಖಾತೆಗೆ ಜಮೆಯಾಗಲಿದೆ.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ.ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ.ಗೃಹ ಲಕ್ಷ್ಮಿ ಯೋಜನೆಗೆ ಗೃಹ ಜ್ಯೋತಿ ಯೋಜನೆ ಮಾದರಿಯಲ್ಲಿ ಆನ್‌ಲೈನ್‌ನಲ್ಲಿ ನೇರವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ. ಬದಲಿಗೆ ಸರ್ಕಾರ ನಿಗದಿಪಡಿಸಿರುವ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ಸರ್ಕಾರ ನಿಯೋಜಿಸಿರುವ ಪ್ರಜಾಪ್ರತಿನಿಧಿಗಳ ಸಹಾಯದಿಂದ ತಮ್ಮ ಮನೆಗಳ ಬಳಿಯೇ ನೋಂದಣಿ ಮಾಡಿಕೊಳ್ಳಬಹುದು. 1.28 ಕೋಟಿ ಫಲಾನುಭವಿಗಳಿಗೆ ಮುಟ್ಟಲಿರುವ ಈ ಯೋಜನೆಗೆ ಈ ವರ್ಷ 17,500 ಕೋಟಿ ರು.ವೆಚ್ಚವಾಗುವ ಅಂದಾಜಿದೆ.