• 8 ಸೆಪ್ಟೆಂಬರ್ 2024

‘ನಂಬಿಕೆ’ ಸುಳ್ಳಾಗಿದ್ದಕ್ಕೆ ಅಪಾರ ಸಂತೋಷವಿದೆ’

Digiqole Ad

‘ನಂಬಿಕೆ’ ಸುಳ್ಳಾಗಿದ್ದಕ್ಕೆ ಅಪಾರ ಸಂತೋಷವಿದೆ’: ರಾಜ್ ಬಿ ಶೆಟ್ಟಿ!

ಹೊಸ ಕಲಾವಿದರು ಸೇರಿಕೊಂಡು ಮಾಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವು ಇಂದು (ಜುಲೈ 21) ರಾಜ್ಯಾದ್ಯಂತ ತೆರೆಕಂಡಿದೆ. ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಈ ಚಿತ್ರತಂಡಕ್ಕೆ ನಟ ಮತ್ತು ನಿರ್ದೇಶಕ ರಾಜ್‌ ಬಿ ಶೆಟ್ಟಿ ಅವರು ಅಭಿನಂದನೆ ತಿಳಿಸಿದ್ದಾರೆ.

ರಾಜ್ ಬಿ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ?

”ಪ್ರೀತಿಯ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತಂಡಕ್ಕೆ, ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಕನ್ನಡ ಪ್ರೇಕ್ಷಕರ ಕೊರತೆಯಿದೆ ಎಂಬ ಹತಾಶೆಯನ್ನು ಸತ್ಯವೆಂದು ನಂಬಿ ಕುಳಿತಿದ್ದೆವು ನಾವು. ಮೊದಲ ಬಾರಿಗೆ ನಮ್ಮ ನಂಬಿಕೆ ಸುಳ್ಳಾಗಿದ್ದಕ್ಕೆ ಅಪಾರ ಸಂತೋಷವಿದೆ. ಅದನ್ನು ಕೆಡವಿದ ನಿಮ್ಮ ತಂಡಕ್ಕೆ ನಮ್ಮ ಪ್ರಣಾಮಗಳು. ಚಿತ್ರಮಂದಿರದಲ್ಲಿ ಪ್ರೇಕ್ಷಕರು ನುಗ್ಗಬೇಕಾದಲ್ಲಿ ನೂರಾರು ಕೋಟಿ ಬಜೆಟ್‌ನ ಅಗತ್ಯವಿದೆ, ಸ್ಟಾರ್ ನಟರ, ನಿರ್ದೇಶಕರ ಅನಿವಾರ್ಯತೆಯಿದೆ ಎಂಬೆಲ್ಲ ಸುಳ್ಳುಗಳನ್ನು ಸಮರ್ಥವಾಗಿ ನಿವಾಳಿಸಿ ಎಸೆದದ್ದಕ್ಕೆ ಧನ್ಯವಾದಗಳು” ಎಂದು ಬರೆದಿದ್ದಾರೆ.

ಮುಂದುವರೆದು, ”ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’, ಇದು ಹುಚ್ಚು ಮನಸ್ಸಿನ ಅಭಿವ್ಯಕ್ತಿ. ಹತ್ತಾರು ಹುಡುಗರು ಗಂಭೀರವಾಗಿ ಮಾಡಿದ ತಮಾಷೆಯ ಸಿನಿಮಾ. ಜೊತೆಗೆ ಈ ಸಿನೆಮಾ ಮುಂದೆ ಬರುವ ಇನ್ನಷ್ಟು ಹುಚ್ಚು ಹುಡುಗರಿಗೆ ಧೈರ್ಯ. ಇಂಥ ಸಿನಿಮಾಗಳು ಗೆದ್ದಾಗ ಮಾತ್ರ ಚಿತ್ರೋದ್ಯಮಕ್ಕೆ ನಿಜವಾದ ಲಾಭ. ಕನಸುಗಳಿಗೆ ಬಂಡವಾಳದ ಭಯವಿರಬಾರದು, ಕನಸುಗಳಿಗೆ ಸಿದ್ದ ಸೂತ್ರಗಳ ಹೊರೆಯಿರಬಾರದು, ಕನಸುಗಳಿಗೆ ವ್ಯಾಪಾರದ ಹಂಗಿರಬಾರದು.

ಕನಸುಗಳಿಗೆ ಪ್ರಾಮಾಣಿಕತೆ, ಹಸಿವು, ಧೈರ್ಯ, ಅಪಾರ ಹುಚ್ಚು, ಒಂದಷ್ಟು Practicality ಇಷ್ಟು ಜೊತೆಗಿದ್ದರೆ “ನೀವೂ” ಒಂದು ಸಿನಿಮಾ ಮಾಡಬಹುದು. ಇದನ್ನು ನಿರೂಪಿಸಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತಂಡಕ್ಕೆ ಜಯವಾಗಲಿ” ಎಂದು ಅಕ್ಕರೆಯಿಂದ ರಾಜ್ ಬಿ ಶೆಟ್ಟಿ ಶುಭ ಹಾರೈಸಿದ್ದಾರೆ.

 

ಬಹುತೇಕ ಹೊಸಪ್ರತಿಭೆಗಳೇ ಸೇರಿ ಮಾಡಿದ ಈ ಸಿನಿಮಾ ಒಂದು ಹಾಸ್ಟೆಲ್ಲ್ಲಿ ಒಂದು ರಾತ್ರಿಯಲ್ಲಿ ನಡೆಯುವ ಘಟನೆಗಳನ್ನೇ ಆಧರಿಸಿದ ಹಾಸ್ಯಮಿಶ್ರಿತ ಥ್ರಿಲ್ಲರ್ ಸಿನಿಮಾ ಇದು. ಬರೀ ನಾಯಕ ನಾಯಕಿಯ ಪಾತ್ರಕ್ಕೆ ಜೋತು ಬೀಳದೇ, ಕತೆಯಲ್ಲಿನ ಘಟನಾವಳಿಗಷ್ಟೆ ಒತ್ತು ಕೊಟ್ಟು ವಿಭಿನ್ನವಾಗಿ ಸಿನಿಮಾ ಮಾಡಲಾಗಿದ್ದು, ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ