• 8 ಸೆಪ್ಟೆಂಬರ್ 2024

ಉಡುಪಿ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

 ಉಡುಪಿ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
Digiqole Ad

ಉಡುಪಿ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಆಲ್ಫಿಯಾ, ಶಬನಾಜ್,  ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಜೊತೆಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದರು . ತನಿಖೆ ನಡೆಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶ ಹೊರಡಿಸಿದೆ.ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣ ಆಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.


ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ 509,204,175,34 ಐಪಿಸಿ ಮತ್ತು 66(ಇ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಸಲಾಗಿತ್ತು. ನಂತರ ನಿರೀಕ್ಷಣಾ ಜಾಮೀನು ಕೋರಿ ವಿದ್ಯಾರ್ಥಿನಿಯರು ನ್ಯಾಯಲಯಕ್ಕೆ ಮನವಿ ಸಲ್ಲಿದ್ದರು. ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ವಿದ್ಯಾರ್ಥಿನಿಯರು ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ