ಆನ್‌ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ 28% ತೆರಿಗೆ: ಜಿಎಸ್‌ಟಿ ತಿದ್ದುಪಡಿ ಮಸೂದೆ ಅಂಗೀಕಾರ
ಆನ್‌ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ 28% ತೆರಿಗೆ: ಜಿಎಸ್‌ಟಿ ತಿದ್ದುಪಡಿ ಮಸೂದೆ ಅಂಗೀಕಾರ
ಆನ್‌ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳಲ್ಲಿ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರ ಮತ್ತು ಸಮಗ್ರ ಜಿಎಸ್‌ಟಿ ಕಾನೂನುಗಳಿಗೆ ತಿದ್ದುಪಡಿಗಳನ್ನು ಲೋಕಸಭೆ ಶುಕ್ರವಾರ ಅನುಮೋದಿಸಿದೆ. ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್‌ಲೈನ್ ಗೇಮಿಂಗ್ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ IIIರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಭಯ ಸದನಗಳಲ್ಲಿ ಮಸೂದೆಗಳನ್ನು ಮಂಡಿಸಿದರು.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ 2023 ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಆನ್‌ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್‌ಗಳಲ್ಲಿ ಪ್ರವೇಶ ಮಟ್ಟದ ಪಂತಗಳ ಸಂಪೂರ್ಣ ಮುಖಬೆಲೆಯ ಮೇಲೆ 28 ಶೇಕಡಾ ಜಿಎಸ್‌ಟಿ ವಿಧಿಸಲು ಕೌನ್ಸಿಲ್ ಅನುಮೋದಿಸಿತ್ತು. ಇದೇ ಆಗಸ್ಟ್ 2ರಂದು ಆನ್‌ಲೈನ್ ಗೇಮಿಂಗ್‌ಗೆ 28% ತೆರಿಗೆ ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ ಎಂದು ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.