• 27 ಮಾರ್ಚ್ 2025

ಸುಳ್ಯ : ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶಕ್ಕೆ 

Digiqole Ad

ಸುಳ್ಯ : ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶಕ್ಕೆ 

ಅಕ್ರಮವಾಗಿ ಪ್ಲಾಸ್ಟಿಕ್ ಹೇರಿಕೊಂಡು ಸುಳ್ಯಕ್ಕೆ ಬಂದ ಓಮ್ನಿ ಕಾರನ್ನು ಸುಳ್ಯ ನಗರ ಪಂಚಾಯತ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರಕಾರ ನಿಷೇಧಿಸಿದ ಪ್ಲಾಸ್ಟಿಕ್ ಕವರ್ ಗಳನ್ನು ಸುಳ್ಯದಲ್ಲಿ ಮಾರಾಟ ಹಾಗೂ ಬಳಕೆ ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸಿತ್ತು ಆದರೂ ಸುಳ್ಯಕ್ಕೆ ಬಂದು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಓಮ್ನಿ  ಕಾರು ಸಹಿತ 5 ಕ್ವಿಂಟಾಲ್ ಪ್ಲಾಸ್ಟಿಕ್ ವಶಕ್ಕೆ ಪಡೆದ ನಗರ ಪಂಚಾಯತ್. ಅಂಗಡಿಗಳಿಗೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ವಿಚಾರ ತಿಳಿದ ನಗರ ಪಂಚಾಯತ್ ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ಪಂಚಾಯತ್ ಅಧಿಕಾರಿಗಳನ್ನು ವಿಚಾರಿಸಿದಾಗ ಈ ಕುರಿತಂತೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದುರು.

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ