ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಯಡಿಯಲ್ಲಿ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.