• 8 ಸೆಪ್ಟೆಂಬರ್ 2024

ಸುಳ್ಳು ಸುದ್ದಿ ಪತ್ತೆಗೆ ಸರ್ಕಾರ ಕ್ರಮ; ಕರ್ನಾಟಕದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

Digiqole Ad

ಸುಳ್ಳು ಸುದ್ದಿ ಪತ್ತೆಗೆ ಸರ್ಕಾರ ಕ್ರಮ; ಕರ್ನಾಟಕದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್​​ಗಳ ಪತ್ತೆ ಹಚ್ಚಲು ಹಾಗೂ ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ ನೀಡಲು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದರು.

ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವುದರ ಜತೆಗೆ ಸಮಾಜದ ಧ್ರುವೀಕರಣಕ್ಕೆ ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹಾಗೂ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ (Fact Check) ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್​​ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ