• 8 ಸೆಪ್ಟೆಂಬರ್ 2024

ಚೆಸ್‌ ವಿಶ್ವಕಪ್‌ ಫೈನಲ್‌: ಪ್ರಜ್ಞಾನಂದ vs ಕಾರ್ಲ್‌ಸನ್ ಮೊದಲ ಪಂದ್ಯ ಡ್ರಾ, ನಾಳೆ 2ನೇ ಫೈಟ್

Digiqole Ad

ಚೆಸ್‌ ವಿಶ್ವಕಪ್‌ ಫೈನಲ್‌: ಪ್ರಜ್ಞಾನಂದ vs ಕಾರ್ಲ್‌ಸನ್ ಮೊದಲ ಪಂದ್ಯ ಡ್ರಾ, ನಾಳೆ 2ನೇ ಫೈಟ್

ಅಜರ್‌ಬೈಜಾನ್‌ ನಡೆಯುತ್ತಿರುವ ಫಿಡೆ ಚೆಸ್ ವಿಶ್ವಕಪ್ 2023ರ ಫೈನಲ್​ನ ಮೊದಲ ಪಂದ್ಯವನ್ನು ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಜ್ಞಾನಂದ ಡ್ರಾ ಮಾಡಿಕೊಂಡಿದ್ದಾರೆ. ಚೆಸ್ ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಭಾರತದ ಪ್ರಜ್ಞಾನಂದ ಇತಿಹಾಸ ಸೃಷ್ಟಿಸಿದ್ದಾರೆ. ಸೆಮಿ ಫೈನಲ್‌ನಲ್ಲಿ ವಿಶ್ವದ ಮೂರನೇ ಶ್ರೇಯಾಕಂದ ಫ್ಯಾಬಿಯಾನೊ ಕರುವಾನ ಅವರನ್ನು ಸೋಲಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಸೋಮವಾರ ನಡೆದ ಸೆಮಿಫೈನಲ್‌ನ ಟೈಬ್ರೇಕರ್​ನಲ್ಲಿ ವಿಶ್ವದ ನಂಬರ್ 3ನೇ ಆಟಗಾರ ಫ್ಯಾಬಿಯಾನೊ ಕರುವಾನಾ ಅವರನ್ನು ಮಣಿಸಿ ಪ್ರಜ್ಞಾನಂದ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ಕ್ಯಾಂಡಿಡೇಟ್ಸ್​ ಟೂರ್ನಿಗೆ ಅರ್ಹತೆ ಪಡೆದುಕೊಂಡಿದ್ದರು. ಬಾಬಿ ಫಿಶರ್ ಮತ್ತು ಕಾರ್ಲ್‌ಸನ್ ನಂತರ ಕ್ಯಾಂಡಿಡೇಟ್ಸ್ ಟೂರ್ನಮೆಂಟ್‌ಗೆ ಅರ್ಹತೆ ಪಡೆದ 3ನೇ ಕಿರಿಯ ಆಟಗಾರ ಎಂಬ ಖ್ಯಾತಿಯನ್ನು ಆರ್.ಪ್ರಜ್ಞಾನಂದ ಗಳಿಸಿದ್ದಾರೆ.

ವಿಶ್ವದ ಅಗ್ರ ಶ್ರೇಯಾಂಕಿತ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ 35 ನಡೆಗಳ ನಂತರ ಪಂದ್ಯ ಡ್ರಾ ಕಂಡಿದೆ. ನಾಳೆ ಎರಡನೇ ಕ್ಲಾಸಿಕಲ್ ಪಂದ್ಯ ನಡೆಯಲಿದೆ.ವಿಶ್ವದ ನಂಬರ್ 1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಫೈನಲ್‌ನಲ್ಲಿ ಪೈಪೋಟಿ ನಡೆಸಲಿದ್ದಾರೆ.ಯುವ ಪ್ರತಿಭೆ ಪ್ರಜ್ಞಾನಂದ ಐದು ಬಾರಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರ ನಂತರ ಕ್ಯಾಂಡಿಡೇಟ್ಸ್ ಟೂರ್ಮೆಂಟ್‌ನಲ್ಲಿ ಸೆಮಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಚೆಸ್ ಆಟಗಾರ ಎನಿಸಿದ್ದಾರೆ

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ