• 8 ಸೆಪ್ಟೆಂಬರ್ 2024

ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ

Digiqole Ad

ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ

ಗೃಹ ಬಳಕೆಯ ಪ್ರತಿ LPG ಸಿಲಿಂಡರ್ ಗೆ ಹೆಚ್ಚುವರಿಯಾಗಿ 200 ರೂ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.ಉಜ್ವಲಾ ಯೋಜನೆಯಡಿಯಲ್ಲಿ ಸಂಪರ್ಕ ಪಡೆದು ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬಳಸುತ್ತಿರುವವರು ಸಿಲಿಂಡರ್‌ಗೆ 200 ರೂ.ಗಳ ಸಬ್ಸಿಡಿ ಪಡೆಯುತ್ತಿದ್ದಾರೆ. ಈ ಫಲಾನುಭವಿಗಳು ಇನ್ನು ಮುಂದೆ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ಒಟ್ಟು 400 ರೂ. ಸಬ್ಸಿಡಿ ಪಡೆಯಲಿದ್ದಾರೆ.

ಮೂಲಗಳ ಪ್ರಕಾರ ಸಬ್ಸಿಡಿ ದರವು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಅನಿಲ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಖಾತೆಗಳಿಗೆ ಜಮೆ ಆಗಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ