• 15 ಫೆಬ್ರವರಿ 2025

ನಾದಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ-ಅಕ್ಟೋಬರ್ 15ಕ್ಕೆ ನಾಡಹಬ್ಬಕ್ಕೆ ಚಾಲನೆ

Digiqole Ad

ನಾದಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ – ಅಕ್ಟೋಬರ್ 15ಕ್ಕೆ ನಾಡಹಬ್ಬಕ್ಕೆ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಅಕ್ಟೋಬರ್​ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾದ ಹಂಸಲೇಖ
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮೈಸೂರು ದಸರಾ 2023 ಅನ್ನು ಉದ್ಗಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಪ್ರಕಟಿಸಿದ್ದಾರೆ. ಮೈಸೂರು ದಸರಾ ಗಜಪಯಣ ಸೆಪ್ಟೆಂಬರ್‌ 1ರಂದು ನಡೆಯಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಅಕ್ಟೋಬರ್‌ 15ರ ಬೆಳಗ್ಗೆ ಮೈಸೂರು ದಸರಾ ಉದ್ಘಾಟನೆಗೊಳ್ಳಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ