• 22 ನವೆಂಬರ್ 2024

ಗೃಹಲಕ್ಷ್ಮಿ ಯೋಜನೆ : ದ.ಕ.ದಲ್ಲಿ 2,38,352 ‘ಗೃಹಲಕ್ಷ್ಮಿ’ಯರಿಗೆ 47,67,04,000 ರೂ. ಪಾವತಿ

Digiqole Ad

ಗೃಹಲಕ್ಷ್ಮಿ ಯೋಜನೆ : ದ.ಕ.ದಲ್ಲಿ 2,38,352 ‘ಗೃಹಲಕ್ಷ್ಮಿ’ಯರಿಗೆ 47,67,04,000 ರೂ. ಪಾವತಿ

ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು ‘ಗೃಹ ಲಕ್ಷ್ಮಿ’ ಯೋಜನೆಯನ್ನು ಇಂದು ಆಗಸ್ಟ್ 30 ರಂದು ಜಾರಿಗೆ ತಂದಿದೆ. ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಣವನ್ನು ವರ್ಗಾಯಿಸಿದರು.ಗೃಹಲಕ್ಷ್ಮೀ ಯೋಜನೆ ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಪೈಕಿ ಮಹತ್ವದ್ದಾಗಿದೆ. ಅತಿ ಹೆಚ್ಚು ಫ‌ಲಾನುಭವಿಗಳು ಮಾತ್ರವಲ್ಲ, ಯೋಜನಾ ವೆಚ್ಚವೂ ಎಲ್ಲದಕ್ಕಿಂತ ಹೆಚ್ಚಿದೆ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮೈಸೂರಿನಲ್ಲಿ ಯೋಜನೆಗೆ ಚಾಲನೆ ನೀಡಿದರು.

ಅದರಂತೆ ದಕ್ಷಿಣ ಕನ್ನಡದಲ್ಲಿ ಮಂಗಳೂರು, ಆ. 30: ದ.ಕ. ಜಿಲ್ಲಾ ಮಟ್ಟದ ‘ಗೃಹಲಕ್ಷ್ಮಿ’ ಯೋಜನೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ಚಾಲನೆ ನೀಡಲಾಯಿತು. ದ.ಕ. ಜಿಲ್ಲೆಯಲ್ಲಿ ಈವರೆಗೆ 3,15,726 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು, ಬುಧವಾರ 2,38,352 ಫಲಾನುಭವಿಗಳಿಗೆ 47,67,04,000 ರೂ. ಪಾವತಿಯಾಗಿದೆ. ಉಳಿದ 77374 ಫಲಾನುಭವಿಗಳ ಮಾಹಿತಿ ಸೇವಾಸಿಂಧುವಿನಲ್ಲಿ ಅಪ್ಲೋಡ್ ಆಗಬೇಕಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ