• 7 ಸೆಪ್ಟೆಂಬರ್ 2024

ಪರಿಸರಸ್ನೇಹಿಯಾಗಿ ಗೌರಿ ಗಣೇಶ ಹಬ್ಬ ಆಚರಿಸಿ

Digiqole Ad

ಪರಿಸರಸ್ನೇಹಿಯಾಗಿ ಗೌರಿ ಗಣೇಶ ಹಬ್ಬ ಆಚರಿಸಿ

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಯೊಂದಿಗೆ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ತದನಂತರ ಗೌರಿ, ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ ವತಿಯಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ವಿಸರ್ಜಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ  ವೆಂಕಟ್ ರಾಜಾ ಅವರು ಮನವಿ ಮಾಡಿಕೊಂಡಿದ್ದಾರೆ.

ಸೆಪ್ಟೆಂಬರ್ 18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಲಾಗಿದೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸಬೇಕು.

ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣೂ, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯ್ತಿಯಿoದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು .

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್ಗಳನ್ನು  ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮಾಡಬಾರದೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ