ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ‘ಸುಮೋಟೋ ಕೇಸ್’: ಸಿಎಂ ಸಿದ್ದರಾಮಯ್ಯ
ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ‘ಸುಮೋಟೋ ಕೇಸ್’: ಸಿಎಂ ಸಿದ್ದರಾಮಯ್ಯ
ದ್ವೇಷ ಭಾಷಣಕಾರರು ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರು ಸೇರಿದಂತೆ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ (ಸುಮೋಟೋ) ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸುಳ್ಳು ಸುದ್ದಿ ಹಬ್ಬಿಸುವ ಮತ್ತು ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಸಾರ್ವಜನಿಕರು ದೂರು ನೀಡುವವರೆಗೆ ಕಾಯಬೇಕಾಗಿಲ್ಲ . ಪೊಲೀಸರೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನೃಪತುಂಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ವಿವರಣೆ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ. ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯೆಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಹಾಗೂ ಡಿಜಿಪಿ-ಐಜಿ ಅಲೋಕ್ ಮೋಹನ್ ಉಪಸ್ಥಿತರಿದ್ದರು.