ಕೇರಳದಲ್ಲಿ ಅವಳಿ ಸ್ಪೋಟ, ಬಾಂಬ್ ಇಟ್ಟಿದ್ದು ನಾನೇ ಎಂದು ಪೊಲೀಸರಿಗೆ ಶರಣಾದ ಆರೋಪಿ!
ಕೇರಳದಲ್ಲಿ ಅವಳಿ ಸ್ಪೋಟ, ಬಾಂಬ್ ಇಟ್ಟಿದ್ದು ನಾನೇ ಎಂದು ಪೊಲೀಸರಿಗೆ ಶರಣಾದ ಆರೋಪಿ!
ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೈವಾಡ ಶಂಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ. 2000ಕ್ಕೂ ಹೆಚ್ಚು ಜನರು ಪ್ರಾರ್ಥನೆಗಾಗಿ ಸೇರಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದ ವೇಳೆ ಸುಮಾರು 2500 ಮಂದಿ ಸಮಾವೇಶ ಕೇಂದ್ರದಲ್ಲಿದ್ದರು. ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. 10 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳು ಕಳಮಸ್ಸೆರಿ ವೈದ್ಯಕೀಯ ಕಾಲೇಜು ಮತ್ತು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಮಧ್ಯೆ ವ್ಯಕ್ತಿಯೊಬ್ಬ ಕೊಡಕಾರ ಪೊಲೀಸ್ ಠಾಣೆಗೆ ಬಂದು ತಾನೇ ಬಾಂಬ್ ಇಟ್ಟಿದ್ದು, ಎಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ. ತಾನೂ ಕೊಚ್ಚಿ ಮೂಲದವನು ಎಂದು ತಿಳಿಸಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟಿದ್ದು ಶಂಕಿತನನ್ನ ವಶಕ್ಕೆ ಪಡೆದಿರುವ ಪೊಲೀಸರು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಹೆಚ್ಚಿನ ವಿಚಾರಣೆಗಾಗಿ ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.