• 22 ನವೆಂಬರ್ 2024

ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭ

 ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭ
Digiqole Ad

ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭ

 

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ 5ನೇ ಗ್ಯಾರಂಟಿ ಯುವ ನಿಧಿ ಯೋಜನೆ ಜಾರಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ಸಚಿವ ಶರಣ ಪ್ರಕಾಶ್ ಪಾಟೀಲ್ ಎಕ್ಸ್​ ನಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದಿದ್ದಾರೆ.‌ ಈ ಸಂಬಂಧ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ