ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ
ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಿಂದ ತೀವ್ರ ಬರಲಾಗ ಆವರಿಸಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಬರುತ್ತಿದ್ದಾರೆ. ಇದೀಗ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಡಿಸೆಂಬರ್ ಕೊನೆವರೆಗೂ ತಮಿಳುನಾಡಿಗೆ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ. ಡಿಸೆಂಬರ್ ಅಂತ್ಯದವರೆಗೆ ಪ್ರತಿ ದಿನ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ.