ವಿದ್ಯಾರ್ಥಿನಿಲಯ ಉದ್ಘಾಟನೆ ಹಾಗೂ ವಾಲ್ಮೀಕಿ ಆಶ್ರಮಶಾಲೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ದಿನೇಶ್ ಗುಂಡೂರಾವ್
ವಿದ್ಯಾರ್ಥಿನಿಲಯ ಉದ್ಘಾಟನೆ ಹಾಗೂ ವಾಲ್ಮೀಕಿ ಆಶ್ರಮಶಾಲೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ದಿನೇಶ್ ಗುಂಡೂರಾವ್
ಸುಳ್ಯ, ಜ.23: ಸುಳ್ಯ ತಾಲೂಕಿನ ಬಾಳಿಲ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮಶಾಲೆಯ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಸುಳ್ಯ ಪುರಭವನದಲ್ಲಿ ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.