ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಣೂರು ಗ್ರಾಮದ ಕಲೇರಿಯ ಬಾಡಿಗೆ ಮನೆಗೆ NIA ದಾಳಿ
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಣೂರು ಗ್ರಾಮದ ಕಲೇರಿಯ ಬಾಡಿಗೆ ಮನೆಗೆ NIA ದಾಳಿ
ಬೆಳ್ಳಾರೆ ಠಾಣಾ ವ್ಯಾಪ್ತಿಯ ಸುಳ್ಯ ತಾಲೂಕಿನ ಎಣ್ಣೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ?:ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಸಮಸ್ಯೆ ಹೆಚ್ಚಳ: ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ
ಪುತ್ತೂರು ಸುಬ್ರಹ್ಮಣ್ಯ ಹೆದ್ದಾರಿಯ ಅಂಚಿನಲ್ಲಿರುವ ಮನೆ NIA ದಾಳಿಗೆ ತುತ್ತಾದ ಮನೆ. ಕಳೆದ 2-3 ದಿನಗಳಿಂದ ಇಲ್ಲಿ ಬೀಡು ಬಿಟ್ಟಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಘಲು ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಶಸ್ತ್ರಾಸ್ತ್ರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಸದ್ಯ ಅಧಿಕಾರಿಗಳು ಯಾರನ್ನು ವಶಕ್ಕೆ ಪಡೆದಿಲ್ಲ ಎಂದು ತಿಳಿದು ಬಂದಿದ್ದು ಮಾಹಿತಿ ಕಲೆ ಹಾಕುವ ಹಾಗೂ ಪರಿಶೀಲನೆ ನಡೆಸುವ ಕಾರ್ಯ ನಡೆಸುತ್ತಿದ್ದಾರೆ.