ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಭಟ್ಕಳಕ್ಕೆ ತೆರಳಿರುವ ಅನುಮಾನ.!
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಭಟ್ಕಳಕ್ಕೆ ತೆರಳಿರುವ ಅನುಮಾನ.!
💥ಸ್ಫೋಟಕ ಮಾಹಿತಿ ಲಭ್ಯ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
💥ಆರೋಪಿ ಭಟ್ಕಳಕ್ಕೆ ತೆರಳಿರುವ ಶಂಕೆ.
ಈ ಸುದ್ಧಿ ಓದಿದ್ದೀರಾ: ಕರಾವಳಿಯಲ್ಲಿ N.I.A ಹದ್ದಿನ ಕಣ್ಣು!
ಬೆಂಗಳೂರಿನ ಸುಜಾತ ಸರ್ಕಲ್ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದು, ನಂತರ ತುಮಕೂರಿನಿಂದ ಬಳ್ಳಾರಿಗೆ ಬಸ್ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.
💥 ರಾಷ್ಟ್ರೀಯ ತನಿಖಾ ದಳದಿಂದ ತೀವ್ರ ಶೋದ.
ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ತೀವ್ರ ಶೋಧ ನಡೆಸಿ, ಮಾಹಿತಿ ಕಲೆ ಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಬಗ್ಗೆ ಸುಳಿವು ಎನ್ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ.
ಈ ಸುದ್ಧಿ ಓದಿದ್ದೀರಾ: ಬಾಂಬ್ ಇದೆ ಎಂದು ಜೋಕೆ ಮಾಡಿದ ವ್ಯಕ್ತಿ! ಮುಂದೇನಾಯ್ತು ನೋಡಿ!