• 22 ನವೆಂಬರ್ 2024

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು.!

 ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು.!
Digiqole Ad

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂಅರವಿಂದ್ ಕೇಜ್ರಿವಾಲ್’ ಗೆ ಜಾಮೀನು.!

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ.

ಈ ಸುದ್ದಿಯನ್ನು ಓದಿದ್ದೀರಾ.?ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

ಇದಕ್ಕೂ ಮುಂಚೆ ಇಡಿ ಅಧಿಕಾರಿಗಳು ಕೇಜ್ರಿವಾಲ್ ಗೆ ಎಂಟು ಬಾರಿ ಸಮನ್ಸ್ ನೀಡಿದ್ದರು. ಎಂಟು ಬಾರಿ ಸಮನ್ಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ನಂತರ ಕೋರ್ಟ್ ಕ್ರೇಜಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು, ಈ ವಿಚಾರಣೆ ನಡೆಸಿದ ದೆಹಲಿ ಇಡಿ ವಿಶೇಷ ನ್ಯಾಯಾಲಯವು ಜಾಮೀನು ನೀಡಿ ಆದೇಶವನ್ನು ಹೊರಡಿಸಿದೆ. ದೂರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಜ್ರವಾಲ್‌ಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಇಡಿಗೆ ಸೂಚಿಸಿದ್ದು. ಈ ಪ್ರಕರಣದಲ್ಲಿ ಕೇಜ್ರವಾಲ್‌ ಅವರಿಗೆ ನೀಡಲಾದ ಅನೇಕ ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಅವರ ಪ್ರಾಸಿಕ್ಯೂಷನ್ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಮ್ಯಾಜಿಸ್ಟ್ರೀಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಬಿಜೆಪಿ ಮುಖಂಡ ಆರ್.ಆಶೋಕ್ ಬಗ್ಗೆ ಬಜರಂಗದಳ ಅಸಮಾಧಾನ

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಲೋತ್ರಾ ಅವರನ್ನೊಳಗೊಡ ನ್ಯಾಯಪೀಠವು ಕೇಜ್ರಿವಾಲ್ ಅವರನ್ನು ಕೋರ್ಟ್ ನಿಂದ ಹೊರಹೋಗಲು ಅನುಮತಿ ನೀಡಿದೆ. ಅಪರಾಧವು ಜಾಮೀನು ಪಡೆಯಬಹುದಾದ ಕಾರಣ ಆರೋಪಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ಒಪ್ಪಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

GOLD FACTORY NEWS

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ