ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC
ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC
KSRTC ಬಸ್ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ KSRTC ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಅಲ್ಲದೆ, ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ. ಇಂದಿನಿಂದ ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.