• 18 ಅಕ್ಟೋಬರ್ 2024

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ಸಂಸದ ಚೌಟ ಒತ್ತಾಯ

 ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ಸಂಸದ ಚೌಟ ಒತ್ತಾಯ
Digiqole Ad

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ಸಂಸದ ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯಿಸಿದ್ದಾರೆ. ಹಿಂದೆ ಮೀಟರ್ ಗೇಜ್ ಹಳಿಯಿದ್ದಾಗ ಈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಓಡಾಟವಿತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರ ನಿಲ್ಲಿಸಲಾಗಿತ್ತು. ಆನಂತರ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ-ಪುತ್ತೂರು ನಡುವೆ ಓಡಾಟ ನಡೆಸುತ್ತಿದೆ ಎಂದರು. ಇದಕ್ಕೆ ಉತ್ತರಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರೈಲ್ವೇ ವಿಚಾರ ಯಾವುದೇ ಮನವಿಯಿದ್ದರೂ ಸ್ಪಂದಿಸುವುದಾಗಿ ಭರವಸೆ ನೀಡಿದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ