• 22 ನವೆಂಬರ್ 2024

ಕಾಣಿಯೂರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತ ವರ್ಗೀಕರಣ ಶಿಬಿರ.

 ಕಾಣಿಯೂರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತ ವರ್ಗೀಕರಣ ಶಿಬಿರ.
Digiqole Ad

ಕಾಣಿಯೂರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತ ವರ್ಗೀಕರಣ ಶಿಬಿರ.

ರಕ್ತದಾನ ಮಹಾದಾನ, ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ರಕ್ತದಾನ ಮಾಡಬೇಕು.ನಮ್ಮ ಒಂದೊಂದು ಹನಿ ರಕ್ತ ಇನ್ನೊಂದು ಜೀವವನ್ನು ಬದುಕಿಸುವ ಕಾರ್ಯ ಮಾಡುತ್ತದೆ ಮತ್ತು ರಕ್ತ ದಾನ ಮಾಡುವುದರಿಂದ ನಾವು ಕೂಡ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಧುಶ್ರೀ ಹೇಳಿದರು.ಅವರು ಕಣ್ವರ್ಷಿ ಮಹಿಳಾ ಮಂಡಲ ಕಾಣಿಯೂರು ಮತ್ತು ಸುವರ್ಣ ವರ್ಷದ ಸಂಭ್ರಮದಲ್ಲಿರುವ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ವೆನ್ ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ,ರಕ್ತ ವರ್ಗೀಕರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಮಾಜಿ ಕಾರ್ಯದರ್ಶಿಗಳಾದ ಶ್ರೀ ಲಕ್ಷ್ಮಣ ಗೌಡ ಮುಗರಂಜ ವಹಿಸಿದ್ದರು.ವೇದಿಕೆಯಲ್ಲಿ ವೆನ್ ಲಾಕ್ ಆಸ್ಪತ್ರೆಯ ವೈದ್ಯರಾದ ಡಾ. ಗೌತಮ್, ಕೌನ್ಸಿಲರ್ ಶ್ರೀಲತಾ, ಸುಳ್ಯ ತಾಲೂಕು ಆಸ್ಪತ್ರೆಯ ಭಾರತಿ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಯ್ಯ ಗೌಡ ಅನಿಲ, ಭಜನಾ ಮಂಡಳಿಯ ಕಾರ್ಯದರ್ಶಿ ಜಯಂತ ಅಬೀರ, ಕಣ್ವರ್ಷಿ ಮಹಿಳಾ ಮಂಡಲದ ಗೌರವಾಧ್ಯಕ್ಷರಾದ ರೋಹಿಣಿ ಅಬೀರ, ಅಧ್ಯಕ್ಷರಾದ ಮಮತಾ ಅಗಳಿ ಉಪಸ್ಥಿತರಿದ್ದರು.ಪದ್ಮಯ್ಯ ಗೌಡ ಅನಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ರೋಹಿಣಿ ಅಬೀರ ವಂದಿಸಿದರು.ನಾಗವೇಣಿ ಬೆದ್ರಾಜೆ ಕಾರ್ಯಕ್ರಮ ನಿರೂಪಿಸಿದರು.ನಂತರ ರಕ್ತದಾನ ಶಿಬಿರ ಮತ್ತು ರಕ್ತ ವರ್ಗೀಕರಣ ಶಿಬಿರ ನಡೆಯಿತು.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ