ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ(MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟದಿಂದ ಪ್ರತಿಭಟನೆ! ದಕ್ಷಿಣ ಕನ್ನಡದಿಂದ ಎಂಬಿಕೆ ಮತ್ತು ಎಲ್ ಸಿ ಆರ್ ಪಿಗಳು ಪ್ರತಿಭಟನೆಯಲ್ಲಿ ಭಾಗಿ:
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ
ಪುಸ್ತಕ ಬರಹಗಾರರ(MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟದಿಂದ ಪ್ರತಿಭಟನೆ!
ದಕ್ಷಿಣ ಕನ್ನಡದಿಂದ ಎಂಬಿಕೆ ಮತ್ತು ಎಲ್ ಸಿ ಆರ್ ಪಿಗಳು ಪ್ರತಿಭಟನೆಯಲ್ಲಿ ಭಾಗಿ:
ಕರ್ನಾಟಕ ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶದ ಮಹಿಳೆಯರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಅಭಿವೃದ್ಧಿಗೆ ಹಗಲು ರಾತ್ರಿ ಶ್ರಮಿಸಿ ದುಡಿಯುತ್ತಿರುವ ಮುಖ್ಯ ಪುಸ್ತಕ ಬರಹಗಾರರ (MBK) ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ(LCRP) ಮತ್ತು ಸಖಿಯರಿಗೆ ಸರಿಯಾದ ವೇತನ ನೀಡಿ ಸಂಘಗಳ ಆಧಾರದ ಮೇಲೆ ಗ್ರೇಡಿಂಗ್ ಮಾಡಿ ವೇತನ ನೀಡಲು ಆದೇಶ ಮಾಡಿರುವ ಸುತ್ತೋಲೆಯನ್ನು ತಕ್ಷಣ ಹಿಂಪಡೆದು ಸಮಾನ ವೇತನ ನೀಡಿ ನಂತರದ ಹಂತದಲ್ಲಿ ಗ್ರೇಡಿಂಗ್ ಮೂಲಕ ಅತೀ ಹೆಚ್ಚು ವ್ಯವಹರಿಸುವ ಮುಖ್ಯ ಪುಸ್ತಕ ಬರಹಗಾರರ (MBK) ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ(LCRP) ಗಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಉತ್ತೇಜಿಸಿ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರ MBK) ಮತ್ತು ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ(LCRP) ಸಖಿಯರ ಮಹಾ ಒಕ್ಕೂಟ ರಾಜ್ಯಾಧ್ಯಕ್ಷರು ರುದ್ರಮ್ಮ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ,ಕಡಬ , ಸುಳ್ಯ , ಮಂಗಳೂರು , ಮೂಡಬಿದಿರೆ , ಮೂಲ್ಕಿ ,ಉಲ್ಲಾಳ , ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಎಂಬಿಕೆ ಎಲ್ ಸಿ ಆರ್ ಪಿಗಳು ಭಾಗಿ ಆಗಿದ್ದರು.